ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

Share with

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್‌ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಶನಿವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಹಿರಿಯ ಪತ್ರಕರ್ತರಾದ ಆರ್.ಎನ್. ಪೂವಣಿ ಹಾಗೂ ಅರವಿಂದ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *