ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Share with

ಮಂಗಳೂರು: ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ನ.13ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಪ್ರಕೃತಿ ಶೆಟ್ಟಿ ಎಂದು ಗುರುತಿಸಲಾಗಿದೆ.

ಮೃತರನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಆಕೆಯ ಹಾಸ್ಟೆಲ್ ಕೊಠಡಿಯಿಂದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆ ತನ್ನ ಜೀವನದಲ್ಲಿ ಹತಾಶಳಾಗಿರುವುದಾಗಿ ಉಲ್ಲೇಖಿಸಿದ್ದಾರೆ.

ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *