ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಎಸ್.ಪಿ ಡಾ| ಅರುಣ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ, ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದರು.
ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಪ್ರವೀಣ್ ಚೌಗಲೆಯನ್ನು ವಶಕ್ಕೆ ಪಡೆಯಲಾಗಿದ್ದು ಇದರೊಂದಿಗೆ ಹಲವಾರು ಶಂಕಿತರ ವಿಚಾರಣೆಯನ್ನೂ ಮಾಡುತ್ತಿದ್ದೇವೆ ಎಂದು ತಿಳಿಸಿದರು.