ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಭಾರತ

Share with

ಮುಂಬೈ: 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದೆ. 

ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಭಾರತ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ 50 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ವಿರಾಟ್ ಕೊಹ್ಲಿ 117 ರನ್, ಶ್ರೇಯಸ್ ಅಯ್ಯರ್ 105 ರನ್, ಶುಭಮನ್ ಗಿಲ್ ಅಜೇಯ 80 ರನ್ ಗಳಿಸಿದರು. ಭಾರತ ನೀಡಿದ 397 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 327 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ಶಮಿ 7 ವಿಕೆಟ್ ಪಡೆದು ಮಿಂಚಿದರು.


Share with

Leave a Reply

Your email address will not be published. Required fields are marked *