ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ..!

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ.

ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ಭಜರಂಗದಳದಲ್ಲಿ ದಿನೇಶ್, ಪ್ರಜ್ವಲ್ ಅವರು ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿದ್ದು, ಲತೇಶ್ ಗುಂಡ್ಯ ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿದ್ದಾರೆ. ಉಳಿದ ಇಬ್ಬರು ಕಾರ್ಯಕರ್ತರಾದ ನಿಶಾಂತ್ ಮತ್ತು ಪ್ರದೀಪ್ ವಿರುದ್ಧವೂ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿದೆ.

ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ವಿರುದ್ಧ ಒಂದೊಂದೇ ಪ್ರಕರಣಗಳಿವೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಸಂಬಂಧ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಗಡೀಪಾರಿಗೆ ಮನವಿ ಮಾಡಲಾಗಿದೆ.

ಲತೇಶ್​ಗೆ ಬಳ್ಳಾರಿ ಜಿಲ್ಲೆಗೆ, ಪ್ರಜ್ವಲ್​ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಬಾರಿಯೂ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರಿಗೆ ಆದೇಶ ನೀಡಲಾಗಿತ್ತು, ಆದರೆ ನ್ಯಾಯಾಲಯ ಮೆಟ್ಟಿಲೇರಿದ್ದ ಕಾರ್ಯಕರ್ತರು ಆದೇಶಕ್ಕೆ ತಡೆ ತಂದಿದ್ದರು. ಇದೀಗ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ತರಿಸಿಕೊಂಡು ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಮಾಡಲು ಸರಕಾರ ಅಸ್ತ್ರ ಪ್ರಯೋಗ ಮಾಡಿದೆಮಾಡಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *