ಉಡುಪಿ: ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗಾಗಿ ನ.16ರಂದು ನೇಜಾರಿನ ಕೊಲೆ ನಡೆದ ಸ್ಥಳಕ್ಕೆ ಕರೆತರಲಾಗಿತ್ತು.
ಮಹಜರು ಬಳಿಕ ಆರೋಪಿಯನ್ನು ಹಿಂದಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಡಿವೈಎಸ್‌ಪಿ ದಿನಕರ ನೇತೃತ್ವದಲ್ಲಿ ಸ್ಥಳ ಮಹಜರಿಗೆ ಆಗಮಿಸಿದ್ದು, ಈ ಸಂದರ್ಭ ಬೆಳಗ್ಗಿನಿಂದ ಕಾಯುತ್ತಿದ್ದ ಆಕ್ರೋಶಿತ ಗುಂಪು ಆರೋಪಿ ಮೇಲೆ ದಾಳಿಗೆ ಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಗಿದೆ. ಜನಾಕ್ರೋಶದ ನಡುವೆ ಮಹಜರು ಪ್ರಕ್ರಿಯೆಯನ್ನು ಮುಗಿಸಿ, ಸುರಕ್ಷಿತವಾಗಿ ಆರೋಪಿಯನ್ನು ವಾಪಾಸು ಕರೆದುಕೊಂಡು ಹೋಗುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.