ಹಿಮಾಚಲ ಪ್ರದೇಶದಲ್ಲಿ ಮಳೆಗೆ ಕೊಚ್ಚಿ ಹೋದ ಸೇತುವೆ; ಸಾವಿರಾರು ಮಂದಿಯ ಪರದಾಟ

Share with

ದೆಹಲಿ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಬೃಹತ್‌ ಗಾತ್ರದ ಮರಗಳು, ಮನೆ, ಸೇತುವೆಗಳು ಕೊಚ್ಚಿ ಹೋಗಿದೆ. ಸಾವಿರಾರು ಮಂದಿ ಪರದಾಡುವಂತಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ದಕ್ಷಿಣ ಭಾರತದಲ್ಲಿ ಇಡೀ ರಾತ್ರಿ ಕಾರ್ಯಾಚರಣೆ ಮೂಲಕ ಜನರನ್ನು ರಕ್ಷಿಸಿದ್ದು ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಹಲವಾರು ಮನೆ, ಕಾರು, ಸೇತುವೆಗಳು ಪ್ರವಾಹಕ್ಕೆ ಕೊಚ್ಚಿಹೋಗಿದ್ದು, ಇಲ್ಲಿಯವರೆಗೆ ಸುಮಾರು 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ಮುಂದಿನ 24ಗಂಟೆಗಳ ಕಾಲ ಜನರು ಮನೆಯಿಂದ ಹೊರಬರದಂತೆ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಮನವಿ ಮಾಡಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *