ಬೆಳ್ತಂಗಡಿ: ಮೋಟಾರ್ ಸೈಕಲ್ ಡಿಕ್ಕಿ ಹೊಡೆಸಿ ಗಾಯಗೊಳಿಸಿರುವ ಕುರಿತು ತೆಂಕಕಾರಂದೂರು ಗ್ರಾಮದ ನಿವಾಸಿ ಅಪೇಕ್ಷಾ(14ವ) ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ವಿಜೇತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ನ.15ರಂದು ಬೆಳಿಗ್ಗೆ ಕುವೆಟ್ಟು ಗ್ರಾಮದ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಗೆ ಹೋಗುವ ರಸ್ತೆಯ ಬಳಿ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಿ ಬಂದಾಗ KA 21 V 5270ನೇ ನಂಬ್ರದ ಮೋಟಾರು ಸೈಕಲನ್ನು ಅದರ ಸವಾರ ವಿಜೇತ್ ಎಂಬವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಅಪೇಕ್ಷಾ ಅವರು ಅಲ್ಲಿಯೇ ರಸ್ತೆಯ ಬದಿಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ. ಘಟನೆ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 108/2023ರಂತೆ ಕಲಂ 279,337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.