ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೃತ್ಯ ನಡೆದ ನೇಜಾರು ತೃಪ್ತಿನಗರದ ಮನೆಗೆ ಆಗಮಿಸಿ, ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.