ನೆಕ್ಕಿಲಾಡಿ: ವ್ಯಕ್ತಿಯ ಮೃತದೇಹ ರಸ್ತೆಯಲ್ಲಿ ಪತ್ತೆ

Share with

ಪುತ್ತೂರು: ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ.

ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *