ಬೈಲೂರು ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆ ವಿವಾದ: ತನಿಖೆಗೆ ಸೂಚನೆ

Share with

ಉಡುಪಿ: ಜಿಲ್ಲೆಯಲ್ಲಿ ನಡೆದಿರುವ ಬೈಲೂರು ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಮತ್ತು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ.

ಉಡುಪಿಯಲ್ಲಿ ನ.20ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆಯ ವಿಚಾರವಾಗಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಆಗಿರುವ ಅವ್ಯವಾಹರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಹೇಳಿದರು.

ಗಂಗೊಳ್ಳಿಯಲ್ಲಿ ನಡೆದಿರುವ ಅಗ್ನಿ ದುರಂತದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ತಾಂತ್ರಿಕ ಸಮಸ್ಯೆ ಇದ್ದರೂ ಗರಿಷ್ಟ ಪ್ರಮಾಣದ ಪರಿಹಾರ ದೊರಕಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದರು.


Share with

Leave a Reply

Your email address will not be published. Required fields are marked *