ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಯುವಕ ಸಾವು

Share with

ಸುರತ್ಕಲ್: ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ ಎಂದು ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು ಗುರುತಿಸಲಾಗಿದೆ.
ಶಾಕಿರ್‌ ತನ್ನ ನಾಲ್ಕು ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದು, ಈ ಸಂದರ್ಭದಲ್ಲಿ ಶಾಕಿರ್‌ ಅವರ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರಿಗೆ ಹಾಗೂ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಕಾವೂರು ಪೊಲೀಸರು, ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Share with

Leave a Reply

Your email address will not be published. Required fields are marked *