ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯಲ್ಲಿ ನ.23ರಂದು ನಡೆದಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.
ಉಜಿರೆಯ ಕಾಲೇಜೊಂದರ ಮೆಕ್ಯಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದೀಕ್ಷಿತ್(20) ಎಂದು ಗುರುತಿಸಲಾಗಿದೆ. ಅವರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.