ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕಲರವ

Share with

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಕಂಬಳದ ಕಲರವ ಆರಂಭವಾಗಲಿದೆ.ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಉದ್ಘಾಟಿಸಲಾಗುತ್ತದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನ.25ರ ಸಂಜೆ 3:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ.

200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿದ್ದು, 157 ಮೀಟರ್ ಉದ್ದ, 8 ಮೀಟರ್ ಅಗಲದ ಕಂಬಳದ ಜೋಡು ಕೆರೆಗೆ ರಾಜಮಹಾರಾಜ ಹೆಸರು ಇಡಲಾಗಿದೆ. ಮುಖ್ಯ ವೇದಿಕೆಗೆ ಪುನೀತ್ ರಾಜಕುಮಾರ್ ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲಾಗಿದೆ. ಕಂಬಳ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ.


Share with

Leave a Reply

Your email address will not be published. Required fields are marked *