ಮಂಗಳೂರು: ಕೆತ್ತಿಕಲ್ ನಲ್ಲಿ ವಿಶೇಷವಾದ ಕಲ್ಲು ಪತ್ತೆ!

Share with

ಮಂಗಳೂರು: ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು ಪತ್ತೆಯಾಗಿದೆ. ಈ ಕಲ್ಲು ಹಲವು ವರ್ಷಗಳಿಂದ ಗಿಡಗಂಟಿಗಳ ನಡುವೆ ಹುದುಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ.

ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು ಪತ್ತೆಯಾಗಿದೆ.

ಕಲ್ಲು ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ಅಲ್ಲಿಗೆ ಹೋಗಿ, ಕಲ್ಲನ್ನು ತಕ್ಷಣ ತೆರವು ಮಾಡಬಾರದು. ನೂರಾರು ವರ್ಷಗಳ ಇತಿಹಾಸವಿದ್ದು, ಕಲ್ಲನ್ನು ಗೌರವಯುತವಾಗಿ ಬೇರೆ ಕಡೆ ಸ್ಥಳಾಂತರಿಸುವಂತೆ ಕೇಳಿಕೊಂಡರು. ಮನವಿಗೆ ಸಮ್ಮತಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರೇನ್ ಮತ್ತು ಹಗ್ಗ ಬಳಸಿ ಕಲ್ಲು ಸ್ಥಳಾಂತರಿಸುವುದಾಗಿ ಭರವಸೆಯನ್ನು ನೀಡಿದರು.


Share with

Leave a Reply

Your email address will not be published. Required fields are marked *