ಬೆಳ್ತಂಗಡಿ: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ಖಂಡಿಸಿ ಪೊಲೀಸರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳ್ತಂಗಡಿ ಆಡಳಿತ ಸೌಧದ ಎದುರು ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನ್ಯಾಯವಾದಿ ಜೆ.ಕೆ.ಪೌಲ್ ಕಾನೂನನ್ನು ಕಾಪಾಡಬೇಕಾದ ಪೊಲೀಸರು ಕಾನೂನನ್ನು ಕೈಗೆತ್ತಿಕೊಂಡು ವಕೀಲರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿರುವುದು ಅತ್ಯಂತ ಖಂಡನೀಯ ವಿಚಾರ, ಕೂಡಲೇ ಪೊಲೀಸರ ವಿರುದ್ದ ಕ್ರಮ ಕೈಗೊಳ್ಖಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ನ್ಯಾಯವಾದಿ ಅಲೋಶಿಯಸ್ ಲೋಬೋ, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ ಕಾನೂನು ಕ್ರಮ ಕೂಗೊಳ್ಳಬೇಕು ಎಂದು ಒತ್ತಾಯಿಸಿದರು.