ಸುಳ್ಯ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಡಿ.2ರಂದು ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಸಂಪಾಜೆ ಗ್ರಾಮದ ಎಡ್ಪಾನೆ ತಿಮ್ಮಪ್ಪ ಪೂಜಾರಿ (65) ಎಂದು ಗುರುತಿಸಲಾಗಿದ್ದು, ತಮ್ಮ ಮನೆಗೆ ನಡೆದುಕೊಂಡು ಹೋಗುವ ದಾರಿಯ ಮದ್ಯೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ತಿಮ್ಮಪ್ಪ ಪೂಜಾರಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.