ಉಪ್ಪಳ: ಕಾಸರಗೋಡು ಜಿಲ್ಲಾ ಮಟ್ಟದ ಗಣಿತ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಹತ್ತನೇ ತರಗತಿಯ ವಿದ್ಯಾರ್ಥಿ ಅಕ್ಷಿತ್ ರಾಮ್.ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಇವನು ನೆಕ್ಕಿಗುಳಿಯ ತಿರುಮಲೇಶ್ವರ ಭಟ್ ಹಾಗೂ ಆಶಾ ದಂಪತಿಗಳ ಸುಪುತ್ರ. ಈತನ ಸಾಧನೆಗೆ ಶಾಲಾ ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ರಕ್ಷಕ ಶಿಕ್ಷಕ ಸಂಘ ಹಾಗೂ ಎಲ್ಲಾ ಅಧ್ಯಾಪಕ, ಸಿಬ್ಬಂದಿ, ವಿದ್ಯಾರ್ಥಿ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.