ಬಂಟ್ವಾಳ: ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ದಿವ್ಯಾಂಗರ ಸಮಸ್ಯೆ ಕುರಿತು ಜಾಗೃತಿ ಕಾರ್ಯಕ್ರಮ

Share with

ಬಂಟ್ವಾಳ: ವಿಕಾಸಂ ಸೇವಾ ಫೌಂಡೇಶನ್ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಕಾರದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ದಿವ್ಯಾಂಗರ ಸಮಸ್ಯೆ ಕುರಿತು ಜಾಗೃತಿ ಕಾರ್ಯಕ್ರಮವು ಬಿ.ಸಿ ರೋಡಿನ ಬಿ.ಜೆ.ಕಾಂಪ್ಲೆಕ್ಸ್ ನಲ್ಲಿರುವ ವಿಕಾಸಂ ಸೇವಾ ಫೌಂಡೇಶನ್ ಸಭಾಂಗಣದಲ್ಲಿ ಡಿ.2ರಂದು ನಡೆಯಿತು.

ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಸುರೇಶ್ ಸಾಲ್ಯಾನ್ ಅವರು ಕಾರ್ಯಕ್ರಮವನ್ನುದರು.

ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಸುರೇಶ್ ಸಾಲ್ಯಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಸಿ.ಎ.ಶಾಂತಾರಾಮ ಶೆಟ್ಟಿ ಅವರು ಹುಟ್ಟಿನಿಂದಲೇ ಬರುವ ಅಂಗವೈಕಲ್ಯದ ಜೊತೆ ಅಪಘಾತದಿಂದ ಉಂಟಾಗುವ ಆಘಾತಗಳ ಕುರಿತು ಪ್ರಸ್ತಾಪಿಸಿದರು.

ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಪ್ರೊ.ಪದ್ಮನಾಭ ಅವರು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ವಿಕಾಸಂ ಸೇವಾ ಫೌಂಡೇಶನ್ ನಿರ್ದೇಶಕ ಗೋಪಾಲ್ ಜಿ.ಎಸ್ ವಹಿಸಿದ್ದರು. ಈ ಸಂದರ್ಭ ರೆಡ್ ಕ್ರಾಸ್ ಸಂಸ್ಥೆ ಸದಸ್ಯರಾಗಿರುವ ಪ್ರಭಾಕರ ಶರ್ಮ, ರವೀಂದ್ರನಾಥ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ನ ನಿಯೋಜಿತ ಅಧ್ಯಕ್ಷ ಕಿಶೋರ್, ಪೂರ್ವಾಧ್ಯಕ್ಷರಾದ ಶನ್ಫತ್ ಶರೀಫ್, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಜಯರಾಜ್ ಎಸ್.ಬಂಗೇರ, ಪದಾಧಿಕಾರಿಗಳಾದ ನಾರಾಯಣ ಸಿ.ಪೆರ್ನೆ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

ವಿಶೇಷಚೇತನ ಮಕ್ಕಳ ಗುರುತಿಸುವಿಕೆ ಹಾಗೂ ಬೆಳೆಸುವ ಹಂತದಲ್ಲಿ ಎದುರಿಸಬೇಕಾದ ಸವಾಲುಗಳು, ಅವರಿಗೆ ನೀಡಬೇಕಾದ ಕಾಳಜಿಯ ಕುರಿತು ಪತ್ರಕರ್ತ ಹರೀಶ ಮಾಂಬಾಡಿ ಅವರು ವಿಚಾರ ಮಂಡಿಸಿದರು. ವಿಕಾಸಂ ನಿರ್ದೇಶಕ ಧರ್ಮಪ್ರಸಾದ್ ರೈ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು ಹಾಗೂ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ಕಾರ್ಯಕ್ರಮದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


Share with

Leave a Reply

Your email address will not be published. Required fields are marked *