ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆಗಳ ದಾಳಿಗೆ ಬಲಿ ಆಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಅರಣ್ಯದ ಬಾಳೆ ಕೆರೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 5 ಆನೆಗಳೊಂದಿಗೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನ.4ರಂದು ಆರಂಭ ಮಾಡಿತ್ತು. ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.