ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೀಡಾಗಿದ್ದ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಡಿ.4ರಂದು ಜಾಮೀನು ಮಂಜೂರು ಮಾಡಿದೆ. ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ.