ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ!

Share with

ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿಯಾಗಿದ್ದು, ಕಾಲೇಜಿನ ಹಾಸ್ಟೆಲ್​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಡಿ.05ರಂದು ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Share with

Leave a Reply

Your email address will not be published. Required fields are marked *