ಉಪ್ಪಳ: ಐಲ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಡೆದ ಮಾಗಣೆ ಕೂಟ ಮತ್ತು ಆಡಳಿತ ಮಂಡಳಿಯ ತೀರ್ಮಾನದಂತೆ ಶ್ರೀ ಕ್ಷೇತ್ರದಲ್ಲಿ ದೊಡ್ಡ ರಂಗಪೂಜೆ ಹಾಗೂ ವಿಶೇಷ ಬಲಿ ಉತ್ಸವವನ್ನು ನಡೆಸುವ ಬಗ್ಗೆ ತೀರ್ಮಾನಕೈಗೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ ಡಿ.10ರಂದು ಸಂಜೆ 4 ಗಂಟೆಗೆ ಭಕ್ತರ ಸಭೆ ಕ್ಷೇತ್ರದಲ್ಲಿ ನಡೆಯಲಿದೆ.
ಸಭೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸುವಂತೆ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




