6 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಸಹಿತ ಆರೋಪಿಗಳಿಬ್ಬರ ಸೆರೆ

Share with

ಮಂಗಳೂರು: ಇಬ್ಬರು ವ್ಯಕ್ತಿಗಳು ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.  

ಮಂಜೇಶ್ವರ ಪಾವೂರು ಗ್ರಾಮದ ಮಚ್ಚಂಪಾಡಿ ನಿವಾಸಿ ನವಾಜ್(40), ಬಂಟ್ವಾಳ ಫರಂಗಿಪೇಟೆಯ ಪುದು ಗ್ರಾಮದ ಜುಮಾದಿ ಗುಡ್ಡೆ ಮನೆ ನಿವಾಸಿ ಅಜರುದ್ದೀನ್ ಯಾನೆ ಅಜರ್(38) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 120 ಗ್ರಾಮ್ ತೂಕದ 6,00,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-3, ಡಿಜಿಟಲ್ ತೂಕಮಾಪನ, ಸುಝುಕಿ ಅಕ್ಸಿಸ್ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 6,83,120 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳ ಪೈಕಿ ನವಾಸ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಮತ್ತೋರ್ವ ಆರೋಪಿ ಅಜರುದ್ದೀನ್‌ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ, ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಎರಡು ಕಳ್ಳತನ ಪ್ರಕರಣಗಳಂತೆ ಹೀಗೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ.

ಆರೋಪಿಗಳ ಮತ್ತು ಮಾದಕ ವಸ್ತು ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *