ಬಂಟ್ವಾಳ: ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವವು ಕಲ್ಲಡ್ಕದ ಹನುಮಾನ್ ನಗರದ ಮೈದಾನದಲ್ಲಿ ಡಿ.9ರಂದು ಸಂಜೆ ನಡೆಯಿತು. ರಾತ್ರಿಯವರೆಗೆ ನಡೆದ ನಾನಾ ಸಾಹಸ ಚಟುವಟಿಕೆಗಳಲ್ಲಿ 3,500ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡರು.



ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿ.ಪ.ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಗುರುರಾಜ್ ಗಂಟಿಹೊಳೆ, ಉಮಾನಾಥ ಕೋಟ್ಯಾನ್, ಭಾಗಿರಥಿ ಮುರುಳ್ಯ, ಯಶ್ಪಾಲ್ ಸುವರ್ಣ, ವೇದವ್ಯಾಸ ಕಾಮತ್, ಧೀರಾಜ್ ಮುನಿರಾಜ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಸಚಿವರಾದ ಕೃಷ್ಣಪಾಲೇಮಾರ್, ನಾಗರಾಜ ಶೆಟ್ಟಿ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಇಸ್ರೋ ವಿಜ್ಞಾನಿ ಪ್ರೋ.ನಾಗೇಂದ್ರಯ್ಯ ಸೇರಿದಂತೆ 100ಕ್ಕು ಹೆಚ್ಚು ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು. ಶಾಲೆಯ ಸಂಸ್ಥಾಪಕ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಅವರು ಪ್ರಸ್ತಾವಿಸಿ, ಸ್ವಾಗತಿಸಿದರು.




