ಉಡುಪಿ: ಕಾರ್ಕಳ ನಿಟ್ಟೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಖಾಸಗಿ ಬಸ್ ಮತ್ತು ಮಹೀಂದ್ರ ಜೀಪ್ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಹಲವಾರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ.10ರಂದು ಸಂಜೆ ನಡೆದಿದೆ.
ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಕಾರ್ಕಳ ಕಡೆಗೆ ಬರುತ್ತಿದ್ದ ಮಹೀಂದ್ರ ಜೀಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.