ಕರ್ನಾಟಕದ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ!

Share with

ಬೆಂಗಳೂರು: ಅಪರಿಚಿತ ವ್ಯಕ್ತಿ ಬೆಂಗಳೂರಿನ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಮಾಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿತ್ತು.

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

ದುಷ್ಕರ್ಮಿಯೊಬ್ಬ ನಿನ್ನೆ ತಡ ರಾತ್ರಿ ಸುಮಾರು 11.30ಕ್ಕೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ. ಬೆಂಗಳೂರಿನ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಕರೆ ಮಾಡಿದ್ದಾನೆ ಎನ್ನಲಾಗಿದೆ. ಕರೆ ಬಂದ ಕೂಡಲೇ ಅಲರ್ಟ್ ಆದ ನಗರದ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಕರೆ ತಂದು ರಾಜಭವನವನ್ನು ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಕಡೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಅಂತ ತಿಳಿದು ಬಂದಿದೆ.

ಬಾಂಬ್‌ ಬೆದರಿಕೆ ಕರೆ ಸಂಬಂಧ ಬೆಂಗಳೂರಿನ ವಿಧಾನಸಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಕರೆ ಮಾಡಿದ ಮೊಬೈಲ್ ನಂಬರ್ ಜಾಡು ಹಿಡಿದಿರುವ ಕೇಂದ್ರ ವಿಭಾಗ‌ ಹಾಗೂ ಸೈಬರ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಶದಲ್ಲಿರುವ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.


Share with

Leave a Reply

Your email address will not be published. Required fields are marked *