ಬೆಳಗಾವಿ: ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಡಿ.15ರಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲ ರೈತರ ಸಹಕಾರಿ ಬ್ಯಾಂಕ್ಗಳ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಘೋಷಣೆ ಮಾಡಿದರು.
ಇದೇ ವೇಳೆ ಕೆಲವು ಷರತ್ತುಗಳನ್ನು ವಿಧಿಸಿದ ಸಿದ್ದರಾಮಯ್ಯ ಅವರು ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ತೆಗೆದುಕೊಂಡ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲಕ್ಕೆ ಮಾತ್ರ ಈ ಬಡ್ಡಿ ಮನ್ನಾ ಅನ್ವಯವಾಗುತ್ತದೆ. ಸರ್ಕಾರ ಬಡ್ಡಿ ಮನ್ನಾ ಮಾಡುವ ಅವಧಿಯನ್ನು ಘೋಷಣೆ ಮಾಡಿದ ಅವಧಿಯಲ್ಲಿ ರೈತರು ಸಾಲ ಪಡೆದ ಅಸಲು ಮೊತ್ತವನ್ನು ಪಾವತಿ ಮಾಡಿದಲ್ಲಿ ಮಾತ್ರ ಬಡ್ಡಿ ಮನ್ನಾ ಅನ್ವಯ ಆಗುತ್ತದೆ ಎಂದು ತಿಳಿಸಿದರು.