ಕಾಸರಗೋಡು: ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು, ಕನ್ನಡತಿ ಎನ್. ಗಣ್ಯ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯ ಎಡನೀರು ಸ್ವಾಮೀಜಿಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ವಿದ್ಯಾರ್ಥಿನಿಯಾಗಿರುವ ಗಣ್ಯ, 17 ವರ್ಷದೊಳಗಿನ ಬಾಲಕಿಯರ 50-65 ಕೆಜಿ ವಿಭಾಗದಲ್ಲಿ ಮಿಂಚಿದರು. ಗಣ್ಯ ಸಾಧನೆಯಿಂದಾಗಿ ಕಾಸರಗೋಡು ಜಿಲ್ಲೆ ಸೀನಿಯರ್ ಹಾಗೂ ಜೂನಿಯರ್ ಟೆಕ್ವಾಂಡೋ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ.
ಆರ್‌ಎಸ್‌ಸಿ ಎರ್ನಾಕುಳಂನಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಗೆಲುವಿನೊಂದಿಗೆ ಗಣ್ಯ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.