ಉಪ್ಪಿನಂಗಡಿ: ಯುವವಾಹಿನಿ ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.16ರಂದು ರಾಮನಗರ ರೋಟರಿ ಭವನದಲ್ಲಿ ನಡೆಯಿತು. ಸಿಡಿಪಿಓ ಶ್ರೀಲತಾ ಕಾರ್ಯಕ್ರಮ ಉದ್ಘಾಟಿಸಿದರು.
ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಹರ್ ಕುಮಾರ್ ಎ. ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ನಟೇಶ್ ಪೂಜಾರಿ ಪುಳಿತ್ತಡಿ, ಕೇಂದ್ರ ಸಮಿತಿ ಕಾರ್ಯದರ್ಶಿ ಪ್ರವೀಣ್ ಓಂಕಾರ, ಗೌರವ ಸಲಹೆಗಾರ ವರದರಾಜ್, ನಿಯೋಜಿತ ಅಧ್ಯಕ್ಷ ಸೋಮ ಸುಂದರ ಕೊಡಿಪ್ಪಾನ, ಕಾರ್ಯದರ್ಶಿ ಮಾಧವ ಪೂಜಾರಿ ಮತ್ತು ನಿಯೋಜಿತ ಕಾರ್ಯದರ್ಶಿ ಅನಿತಾ ಸತೀಶ್ ಭಾಗವಹಿಸಿದ್ದರು.
ಯುವ ವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಬಿಲ್ಲವ ಸಮಾಜದ ಮುಖಂಡ ಡಾ.ರಾಜಾರಾಮ್ ಕೆ.ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತಲ್ಲದೆ ಈರ್ವರು ಮಕ್ಕಳನ್ನು ದತ್ತು ಸ್ವೀಕಾರ ಮಾಡಲಾಯಿತು. ಘಟಕಕ್ಕೆ ಸಂಬಂಧಿಸಿದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಲ್ಲವ ಬಂಧುಗಳನ್ನು ಸನ್ಮಾನಿಸಲಾಯಿತು. ಅನಿತಾ ಸತೀಶ್ ವಂದಿಸಿದರು. ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು.