
ಮಂಗಳೂರು: ಖಾಸಗಿ ಬಸ್ ಚಾಲಕರೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಸೋಮೇಶ್ವರ ಕಡಲ ತೀರದಲ್ಲಿ ಪತ್ತೆಯಾಗಿದ್ದು, ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕೊಂಡಾಣ ಬೆಳರಿಂಗೆಯ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರು ತಂದೆ-ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.




