ಪೈವಳಿಕೆ : ಪೈವಳಿಕೆ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು 2022-23ರಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಿ ಪೂರ್ತಿಯಾದ ಜನಕೀಯ ಹೋಟೆಲ್ ನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು.


ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ.ಕೆ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ.ಎಸ್, ಕಾಸರಗೋಡು ಆರ್ ಡಿ ಓ ಅತುಲ್ ಸ್ವಾಮಿನಾಥನ್, ಪಂಚಾಯತ್ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ.ಎನ್, ಆರೋಗ್ಯ – ವಿದ್ಯಾಬ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಝೆಡ್.ಎ ಕಯ್ಯಾರ್, ಜತೆ ಕಾರ್ಯದರ್ಶಿ ಲಾರೆನ್ಸ್ ಎಂಬೀವರು ಮಾತನಾಡಿದರು. ಅಭಿವೃದ್ಧಿ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಚಿಪ್ಪಾರು ಸ್ವಾಗತಿಸಿದರು.




