ಮಂಗಳೂರು: ಶಂಕಿತ ಡೆಂಗ್ಯೂ ಜ್ವರದಿಂದ ನವಾಝ್‌ ನಿಧನ!

Share with

ಮಂಗಳೂರು: ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (32) ಎಂಬ ಯುವಕ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.

ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌

ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ ಡಿ.21ರಂದು ಜ್ವರ ತೀವ್ರವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಡಿ.22ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಜಿ.ಎಲ್‌.ಜಿ ಫಿಶರೀಸ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು.


Share with

Leave a Reply

Your email address will not be published. Required fields are marked *