ರಾಜ್ಯ ಸರ್ಕಾರ ಹಿಜಾಬ್ ನಿಷೇಧದ ಆದೇಶ ವಾಪಸ್ ಪಡೆದಿದ್ದು, ಯಡಿಯೂರಪ್ಪ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಕೆಲವೊಂದು ವಿಚಾರದಲ್ಲಿ ಸರ್ವ ಸ್ವಾತಂತ್ರರಿದ್ದಾರೆ. ಹಾಗೆಂದ ಮಾತ್ರಕ್ಕೆ ಇಂತಹ ನಿರ್ಧಾರ ಸರಿಯಲ್ಲ. ನಾನು ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತರ ಮತಗಳ ಓಲೈಕೆಗೆ ಸಿದ್ದರಾಮಯ್ಯ ಹಿಜಾಬ್ ಆದೇಶವನ್ನು ಹಿಂಪಡೆದಿದ್ದಾರೆ ಎಂದು ಬಿಎಸ್ವೈ ಕಿಡಿಕಾರಿದರು. ಹಿಜಾಬ್ ನಿಷೇಧ ವಾಪಸ್ ಪಡೆಯುವ ಬಗ್ಗೆ ನಿನ್ನೆ ಮೈಸೂರಿನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.