ಬಂಟ್ವಾಳ: ಹಣ ದ್ವಿಗುಣ ಆ್ಯಪ್‌ ನಂಬಿ 21 ಲಕ್ಷ ಕಳೆದುಕೊಂಡಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ..!

Share with

ಬಂಟ್ವಾಳ: ಹಣ ದ್ವಿಗುಣ ಆ್ಯಪ್‌ ನಂಬಿ 21 ಲಕ್ಷ ಕಳೆದುಕೊಂಡಿದ್ದ ಮಹಿಳೆಯೊಬ್ಬರು ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಗಬೆಟ್ಟು ಸಮೀಪದ ಪುಚ್ಚಮೊಗರುನಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ

ಅವರು ಹಣ ದ್ವಿಗುಣಗೊಳಿಸುವ ಆ್ಯಪ್‌ನಲ್ಲಿ 21 ಲಕ್ಷ ರೂ. ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು. ಮೃತಪಟ್ಟ ಮಹಿಳೆ ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.

ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಮೃತದೇಹ ಪತ್ತೆಯಾಗಿದೆ.

ವೀಟಾ ಅವರು ಡಿ.23ರಂದು ರಾತ್ರಿ 9 ಗಂಟೆಗೆ ಮನೆಯಿಂದ ದ್ವಿ-ಚಕ್ರ ವಾಹನದಲ್ಲಿ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದ ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಡಿ.24ರಂದು ಮೃತದೇಹ ಪತ್ತೆಯಾಗಿದೆ.


Share with

Leave a Reply

Your email address will not be published. Required fields are marked *