ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರನ್ನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ನ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ, ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರನ್ನಾಗಿ ಅರವಿಂದ ಬೆಲ್ಲದ್ ಅವರನ್ನು ನೇಮಿಸಲಾಗಿದೆ. ಮುಖ್ಯ ಸಚೇತಕರನ್ನಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ.