ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ ನ್ಯಾಷನಲ್ ಹೋಟೆಲ್ ಮಾಲಕ ಬಿ.ಸುಧಾಕರ್ ಶೆಟ್ಟಿ(72) ಅವರು ಜ.4ರಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಸುಧಾಕರ್ ಶೆಟ್ಟಿ ಅವರು ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ ಅವರು ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.




