ಬಂಟ್ವಾಳ: ಬಸ್‌ ದ್ವಿ-ಚಕ್ರ ವಾಹನಕ್ಕೆ ಡಿಕ್ಕಿ: ವಿದ್ಯಾರ್ಥಿನಿಗೆ ಗಾಯ

Share with

ಬಂಟ್ವಾಳ: ಸರಕಾರಿ ಬಸ್ ದ್ವಿ-ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿ-ಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ಜ.10ರಂದು ಬೆಳಿಗ್ಗೆ ವಗ್ಗದಲ್ಲಿ ಸಂಭವಿಸಿದೆ.

ಸರಕಾರಿ ಬಸ್ ದ್ವಿ-ಚಕ್ರ ವಾಹನಕ್ಕೆ ಡಿಕ್ಕಿ

ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯ ಅವರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಾಯಗೊಂಡಿದ್ದು, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಸರಕಾರಿ ಬಸ್ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಲಭಾಗದಲ್ಲಿ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *