ಬಂಟ್ವಾಳ: ಚಾಕು ತೋರಿಸಿ ಲಕ್ಷಾಂತರ ರೂಪಾಯಿ ನಗನಗದು ದೋಚಿದ ಮುಸುಕುದಾರಿಗಳು..!

Share with

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ-ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದ್ದು, ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ.

ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಪಾಯಿ ಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್, ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ-ನಗದು ದೋಚಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ.

ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲೆ ಬೆದರಿಕೆ ಒಡ್ಡಿದಾಗ ಗೊದ್ರೇಜ್ ನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯೊಂದರಲ್ಲಿ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ ಹರೀಶ್ ಬೇಟಿ ನೀಡಿದ್ದು, ಶ್ವಾನದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *