ಮಂಗಳೂರು: ಮಂಗಳೂರಿನಲ್ಲಿ ಜ.21ರಂದು ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕುರಿತು ಪೂರ್ವಭಾವಿ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜ.12ರಂದು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಜ.21ರಂದು ಪ್ರತೀ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಮಾವೇಶವನ್ನು ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ರಾಜ್ಯದ ಸುಮಾರು 1 ಲಕ್ಷ ಪ್ರತಿನಿಧಿಗಳು ಸೇರುವ ನಿರೀಕ್ಷಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೂತ್, ಗ್ರಾಮ, ವಾರ್ಡ್, ಬ್ಲಾಕ್ ಮಟ್ಟದ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿ ವಿವಿಧ ಸಮಿತಿಗಳನ್ನು ರಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ್ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ವಿ.ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ ಮಾತನಾಡಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅಶೋಕ್ ಕೊಡವೂರು, ಇಬ್ರಾಹಿಂ ಕೋಡಿಜಾಲ್, ಪಿ.ವಿ ಮೋಹನ್, ಮಮತಾ ಗಟ್ಟಿ, ರಕ್ಷಿತ್ ಶಿವರಾಮ್, ಯು.ಕೆ ಮೋನು, ಎಂ.ಎ. ಗಫೂರ್, ಸದಾಶಿವ ಉಳ್ಳಾಲ, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಮ.ನ.ಪಾ ಸದಸ್ಯರು, ಮಾಜಿ ಜಿ.ಪಂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.