ವೀಕ್ಷಕವಾಣಿ: ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜು. 13ರ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು. ನಂತರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.