ಮಂಗಳೂರು: ಮಂಗಳೂರು ನಗರದ ಕದ್ರಿ ಜಾರ್ಜ್ ಮಾರ್ಟಿಸ್ ರೋಡ್ ಸಮೀಪದ ಬಾಡಿಗೆ ಮನೆಯೊಂದರಿಂದ ನಗದು ಹಣ ಹಾಗೂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಬಾಡಿಗೆ ಮನೆಯಲ್ಲಿ ಇದ್ದವರು ಡಿ.14ರಂದು ಮೈಸೂರಿಗೆ ತೆರಳಿ ಜ.16ರಂದು ವಾಪಸ್ ಮನೆಗೆ ಬಂದಾಗ ಬಾಗಿಲಿನ ಬೀಗವು ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಕಪಾಟಿನ ಲಾಕರ್ ನಲ್ಲಿ 70,000 ರೂಪಾಯಿ ನಗದು, ವಾರ್ಡ್ ರೋಬ್ ನ ಸೂಟ್ಕೇಸ್ ನಲ್ಲಿದ್ದ 2 ಬೆಳ್ಳಿಯ ಬಟ್ಟಲು, 1 ಬೆಳ್ಳಿ ಕಲಶ, 1 ಬೆಳ್ಳಿ ಚಮಚ, 1 ಬೆಳ್ಳಿ ಕಪ್, 20 ಬೆಳ್ಳಿ ನಾಣ್ಯಗಳು, ಬೆಳ್ಳಿಸರ, ಬೆಳ್ಳಿಯ ದೀಪ ಸಹಿತ ಸುಮಾರು 56,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.