ಮಧೂರು: ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ವರ್ಷಂಪ್ರತಿಯಂತೆ ಜರಗುವ ಮಕರ ಸಂಕ್ರಮಣ ಉತ್ಸವ ಹಾಗೂ ಸತ್ಯನಾರಾಯಣ ಪೂಜೆಯು ಬಹಳ ವಿಜೃಂಭಣೆಯಿಂದ ಶ್ರೀ ಮಠದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮವನ್ನು ಶ್ರೀ ಮಠದ ಪ್ರಧಾನ ಪುರೋಹಿತರಾದ ವಾಸುದೇವ ಆಚಾರ್ಯರ ನೇತೃತ್ವದಲ್ಲಿ ಪುರೋಹಿತರುಗಳಾದ ಜನಾರ್ಧನ ಆಚಾರ್ಯ, ಮಂಜೇಶ್ ಆಚಾರ್ಯ, ಪ್ರಕಾಶ್ ಆಚಾರ್ಯ ಹಾಗೂ ಮೌನೇಶ ಆಚಾರ್ಯರ ಪೌರೋಹಿತ್ಯದಲ್ಲಿ ಜರಗಿತು. ನಂತರ ದೈವಗಳಿಗೆ ವಿಶೇಷ ತಂಬಿಲ ಸೇವೆಯನ್ನು ನಡೆಸಲಾಯಿತು.