ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ: ಆರೋಪಿ ಬಂಧನ..!

Share with

ಮಂಗಳೂರು: ಆಟೋ ರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಂಗಳೂರು ಬಜಾಲ್ ನಿವಾಸಿ ತೌಸೀಫ್ ಯಾನೆ ತೌಚಿ

ಬಂಧಿತ ಆರೋಪಿ ಮಂಗಳೂರು ಬಜಾಲ್ ನಿವಾಸಿ ತೌಸೀಫ್ ಯಾನೆ ತೌಚಿ(23), ಜನವರಿ 18ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಬಳಿಯಿಂದ 45 ಸಾವಿರ ರೂ. ಮೌಲ್ಯದ 9 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನಿಂದ ಒಟ್ಟು 5,11,000/- ರೂಪಾಯಿ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


Share with

Leave a Reply

Your email address will not be published. Required fields are marked *