ಬೆಳ್ತಂಗಡಿ: ಬೆಳ್ತಂಗಡಿಯ ಉರುವಾಲು ಗ್ರಾಮ ನಿವಾಸಿಯಾದ ಸಂದೇಶ್ ಎಂಬಾತನು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಹಾಗೂ ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಮಾಹಿತಿ ಮೇರೆಗೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯಲ್ಲಿ ಭೂ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಾಯಲ್ ಗ್ಲಾಡ್ಸನ್ ಮಿರಾಂದ ಎಂಬವರು ಸೆ.೧೬ ರಂದು ಬೆಳಿಗ್ಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಬೆಳ್ತಂಗಡಿ ಕಂದಾಯ ನಿರೀಕ್ಷಕರೊಂದಿಗೆ ಸದರಿ ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿಯು ಸುಮಾರು ೩೩,೬೦೦/ ಮೌಲ್ಯದ ಸುಮಾರು ೪೮ ಟನ್ ನಷ್ಟು ಮರಳನ್ನು ಕಳವು ಮಾಡಿ ಅಕ್ರಮವಾಗಿ ದಾಸ್ತಾನು ಹಾಕಿರುವುದು ಕಂಡುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ ೬೬/೨೦೨೩ ಕಲಂ: ೩೭೯ ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.