ರೈಲ್ವೇ ಹಳಿಗೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಮೆಷಿನ್‌

Share with

ಕಾಂಕ್ರೀಟ್ ಮಿಕ್ಸರ್ ಮೆಷಿನ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್ ನಿಂದ ರೈಲ್ವೇ ಹಳಿಗೆ ಬಿದ್ದಿದೆ..

ಬಂಟ್ವಾಳ: ಅಭಿವೃದ್ಧಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಮೆಷಿನ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್ ನಿಂದ ರೈಲ್ವೇ ಹಳಿಗೆ ಬಿದ್ದ ಘಟನೆ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಸಂಜೆಯ ವೇಳೆಗೆ ಘಟನೆ ನಡೆದಿದ್ದು, ಈ ಸಮಯದಲ್ಲಿ ಯಾವುದೇ ರೈಲು ಆಗಮಿಸದ ಹಿನ್ನೆಲೆಯಲ್ಲಿ ತೊಂದರೆ ಉಂಟಾಗಿಲ್ಲ, ಹಳಿಯಿಂದ ಮೆಷಿನ್ ಅನ್ನು ತಕ್ಷಣವೇ ತೆರವುಗೊಳಿಸಲಾಯಿತು. ಘಟನೆಯಲ್ಲಿ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *