ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಕಟ್ಟಿದ ಬ್ರಿಟಿಷರ ಕಾಲದ ಸೇತುವೆಯಲ್ಲಿ ಬಿರುಕು ಕಾಣಿಸಿದ್ದು ಭಾನುವಾರ ರಾತ್ರಿ ಇದನ್ನು ಕಂಡು ಸ್ಥಳೀಯರು ಕೂಡಲೇ ಇಲಾಖೆಗೆ ಮಾಹಿತಿ ನೀಡಿದ್ದು, ಕಂದಾಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸೇತುವೆಯ ಮೇಲಿನ ರಸ್ತೆಯಲ್ಲಿ ಬಿರುಕು ಕಂಡುಬಂದಿದ್ದು, ಇದು ಸೇತುವೆಯ ಬಿರುಕೇ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಪರಿಶೀಲನೆ ಬಳಿಕ ಗೊತ್ತಾಗಬೇಕಿದ್ದು, ಬಿರುಕಿನ ಮಾದರಿ ಕಂಡುಬಂದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.