
ಮೈಸೂರು: ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ದುಷ್ಕರ್ಮಿಗಳು ಉತ್ತನಹಳ್ಳಿ ದೇವಾಲಯಕ್ಕೆ ಹೋಗುವ ರಸ್ತೆ ಬಳಿ ಸೇರಿದಂತೆ ಮೂರು ಕಡೆ ಬೆಂಕಿ ಹೊತ್ತಿಸಿದ್ದರು. ಬಿಸಿಲಿನ ತಾಪಕ್ಕೆ ಒಣಗಿದ್ದ ಚಾಮುಂಡಿ ಬೆಟ್ಟದ ತಪ್ಪಲಿನ ಕುರುಚಲು ಹುಲ್ಲು, ಗಿಡಗಂಟಿಗಳಿಗೆ ಬೆಂಕಿ ವ್ಯಾಪಿಸಿತು.
ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ವಿಶೇಷ ತಂಡ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಜಂಟಿ ಸಹಯೋಗದೊಂದಿಗೆ ಕಾರ್ಯಾಚರಣೆ ಆರಂಭಿಸಿ ರಾತ್ರಿ ವೇಳೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.