ಬಂಟ್ವಾಳ: ರಾಜ್ಯದಲ್ಲಿ ಆಡಳಿತ ನಡೆಸುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ಜನತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಆಶೀರ್ವಾದ ಮಾಡುತ್ತಾರೆ ಎಂದು ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಮಂಗಳವಾರ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಕಾಂಗ್ರೆಸ್ ಆಡಳಿತದ ಎಲ್ಲಾ ಅವಧಿಯಲ್ಲಿ ಬಡವರಿಗೆ ನ್ಯಾಯ ಒದಗಿಸಿ, ಹಿಂದುಳಿದ ವರ್ಗದ ಜನರನ್ನು ಶಕ್ತಿವಂತರಾಗುವಂತೆ ಮಾಡಿದೆ ಎಂದು ವಿಶ್ವಾಸದಿಂದ ಹೇಳಬಹುದು ಎಂದ ಅವರು, ಯುವ ಪೀಳಿಗೆ ಹಳೆಯ ಕಾಲದ ಕಷ್ಟದ ದಿನಗಳನ್ನು ನೆನಪು ಮಾಡಿಕೊಳ್ಳಬೇಕಾಗಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಸಾಮಾಜಿಕ ನ್ಯಾಯದಡಿಯಲ್ಲಿ ಪ್ರತಿಯೊಬ್ಬರು ಅರ್ಥಿಕವಾಗಿ ಸಬಲರನ್ನಾಗಿ ಮಾಡಿದೆ ಎಂದರು.
ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್ ಮಾತನಾಡಿ, ದುರ್ಬಲ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸುವ ಕಾರ್ಯ ಪ್ರಸ್ತುತ ದಿನಗಳಲ್ಲಿ ಆಗಬೇಕಿದ್ದು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಿದ್ದು. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ .ಪೂಜಾರಿ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಪಕ್ಷದ ಧ್ಯೇಯ ಧೋರಣೆಯಿಲ್ಲದೆ ದುರ್ಬಲ ಹಿಂದುಳಿದ ವರ್ಗದ ಜನತೆ ಮುಂದೆ ಬರಲು ಸಾಧ್ಯವಿಲ್ಲ. ಹಾಗಾಗಿ ಜನರ ಕಷ್ಟಗಳಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ತಿಳಿಸಿದರು.
ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್ ಮಾತನಾಡಿ, ಕಾಂಗ್ರೆಸ್ ಈ ಬಾರಿ ಓರ್ವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, 35 ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಜನ ಆಶೀರ್ವಾದ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕಾಂಗ್ರೇಸ್ ಮುಖಂಡ ಜಗದೀಶ್ ಕೊಯಿಲ , ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಹಾಗೂ ಬಿಲ್ಲವ ಸಮುದಾಯಕ್ಕೆ ಗೌರವ ನೀಡಿದ್ದು ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಎಂದು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಸಂಜೀವ ಪೂಜಾರಿ, ಸಜೀಪ ಮೂಡ ಗ್ರಾಮಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಗ್ರಾ.ಪಂ.ಸದಸ್ಯ ಉಮೇಶ್ ಕುಲಾಲ್ ನಾವೂರ, ಪ್ರಮುಖರಾದ ಬಾಬು ಭಂಡಾರಿ ಬಂಟ್ವಾಳ, ಮಾಯಿಲಪ್ಪ ಸಾಲ್ಯಾನ್, ರಾಜಾ ಚೆಂಡ್ತಿಮಾರ್, ಮದುಸೂದನ್ ಸಿದ್ದಕಟ್ಟೆ, ಕರೀಮ್ ಬೊಳ್ಳಾಯಿ, ದಿನೇಶ್ ಶೆಟ್ಟಿಗಾರ್ ಸಿದ್ದಕಟ್ಟೆ, ಚಂದ್ರಹಾಸ ನಾಯಕ್ ಸರಪಾಡಿ, ಉಮೇಶ್ ಬೋಳಂತೂರು, ಹಿಂದುಳಿದ ವರ್ಗಗಳ ಘಟಕದ ಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಮೇಶ್ ಕುಲಾಲ್ ಪಣೋಲಿಬೈಲು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಘಟಕದ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ ಸ್ವಾಗತಿಸಿದರು. ಸುರೇಶ್ ಕುಲಾಲ್ ನಾವೂರ ವಂದಿಸಿದರು.