ಬೇತುಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಭಾನುವಾರ ವ್ಯಕ್ತಿಯೊಬ್ಬ ಹಸುವಿನ ಮೇಲೆ ಅ*ತ್ಯಾಚಾರ ನಡೆಸುತ್ತಿರುವ ವಿಡಿಯೋ ವೈರಲ್ ಆದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಆಕ್ರೋಶಿತ ಸ್ಥಳೀಯರು ಅಂಗಡಿಗಳು, ವಾಹನಗಳು ಮತ್ತು ಮನೆಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪರಿಸ್ಥಿತಿ ನಿಯಂತ್ರಣದಲ್ಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಈ ವಿಡಿಯೋ ಬೆಳಕಿಗೆ ಬಂದ ನಂತರ ಹಿಂದೂ ಪರ ಸಂಘಟನೆಗಳು ಘಟನೆಯ ವಿರುದ್ಧ ಪ್ರತಿಭಟನೆ ನಡೆಸಿದಾಗ ದಾಮ್ಮಿಪುರದಲ್ಲಿ ಕೋಲಾಹಲ ಆರಂಭವಾಗಿದೆ. ಅತ್ಯಾಚಾರಕ್ಕೊಳಗಾದ ಗೋವು ಆರೋಪಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಗೆ ಸಂಬಂಧಿಸಿದೆ ಎಂದು ಹೇಳಲಾದ ಪಂಕ್ಚರ್ ರಿಪೇರಿ ಅಂಗಡಿಗೆ ಗುಂಪೊಂದು ಬೆಂಕಿ ಹಚ್ಚಿದ್ದು ಉದ್ವಿಗ್ನತೆ, ಹಿಂಸಾಚಾರಕ್ಕೆ ಕಾರಣವಾಗಿದೆ. ನಂತರ ಅಂಗಡಿ, ಸಲೂನ್, ಮೊಬೈಲ್ ಹಾರ್ಡ್‌ವೇರ್ ಅಂಗಡಿ ಮತ್ತು ಆಟೋ ಬಿಡಿಭಾಗಗಳ ಅಂಗಡಿ ಸೇರಿದಂತೆ ಇತರ ಸಂಸ್ಥೆಗಳಿಗೂ ಬೆಂಕಿ ಹಚ್ಚಲಾಗಿದೆ.
ಕನಿಷ್ಠ ಏಳು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ನಾಲ್ಕು ಕಾರುಗಳು, ನಾಲ್ಕು ಮೋಟಾರ್ ಸೈಕಲ್‌ಗಳು ಮತ್ತು ಒಂದು ಮನೆನ್ನು ಧ್ವಂಸಗೊಳಿಸಲಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಹತ್ತಿರದ ಜಿಲ್ಲೆಗಳಿಂದ ಪೊಲೀಸ್ ಸಿಬಂದಿಗಳನ್ನು ಕರೆಸಿಕೊಂಡು ನಿಯೋಜಿಸಲಾಗಿದೆ. ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಶಾಂತವಾಗಿರಲು ಮನವಿ ಮಾಡಿ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.




